HomeKarnatakaBIG NEWS: ಅಜ್ಞಾತ ಸ್ಥಳದಲ್ಲಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ; ಸದನದಲ್ಲಿ ಭಾಗಿಯಾಗಲು ಆಗಮಿಸಿದ ಶಾಸಕ

BIG NEWS: ಅಜ್ಞಾತ ಸ್ಥಳದಲ್ಲಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ; ಸದನದಲ್ಲಿ ಭಾಗಿಯಾಗಲು ಆಗಮಿಸಿದ ಶಾಸಕ

ಬೆಂಗಳೂರು: ವಾಲ್ಮೀಕಿ ನಿಗದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೇ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇದೀಗ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ಶಾಸಕ ದದ್ದಲ್ ಗೆ ಇಡಿ ಬಂಧನ ಭೀತಿ ಶುರುವಾಗಿದೆ. ಇದೇ ಕಾರಣಕ್ಕೆ ಅವರು ಅಜ್ಞಾತ ಸ್ಥಳದಲ್ಲಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಅಲ್ಲದೇ ನಿನ್ನೆ ಬೆಳಿಗ್ಗೆ ರಾಯಚೂರಿನಲ್ಲಿ ಮಾಧ್ಯಮಗಳ ಕಣ್ತಪ್ಪಿಸಿ ಖಾಸಗಿ ಕಾರಿನಲ್ಲಿ ಪರಾರಿಯಾಗಿದ್ದ ದೃಶ್ಯ ಇನ್ನಷ್ಟು ಪುಷ್ಠಿ ನೀಡುವಂತಿತ್ತು.

ಇಂದಿನಿಂದ ವಿಧಾನಮಂಡಲ ಅಧಿವೇಶ ಆರಂಭವಾಗಿರುವ ಹಿನ್ನೆಲೆಯಲ್ಲಿ ಇದೀಗ ಶಾಸಕ ದದ್ದಲ್, ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಸದನದಲ್ಲಿಯೇ ಉತ್ತರಿಸುತ್ತೇನೆ. ಎಲ್ಲಿಯೂ ಹೋಗಿರಲಿಲ್ಲ, ಊರಿಗೆ ಹೋಗಿದ್ದೆ ಎಂದಷ್ಟೇ ಹೇಳಿ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular