HomeKarnatakaBIG NEWS: ಮಾಜಿ ಸಚಿವ ನಾಗೇಂದ್ರ ಬೆನ್ನಲ್ಲೇ ವಾಲ್ಮೀಕಿ ನಿಗಮದ ಅದ್ಯಕ್ಷ, ಶಾಸಕ ದದ್ದಲ್ ಗೂ...

BIG NEWS: ಮಾಜಿ ಸಚಿವ ನಾಗೇಂದ್ರ ಬೆನ್ನಲ್ಲೇ ವಾಲ್ಮೀಕಿ ನಿಗಮದ ಅದ್ಯಕ್ಷ, ಶಾಸಕ ದದ್ದಲ್ ಗೂ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬೆನ್ನಲ್ಲೇ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರಿಗೂ ಸಂಕಷ್ಟ ಶುರುವಾಗಿದೆ.

ಶಾಸಕ ಬಸನಗೌಡ ದದ್ದಲ್ ಅವರ ಬೆಂಗಳೂರಿನ ನಿವಾಸ, ವಿಲ್ಲಾದಲ್ಲಿ ನಿನ್ನೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಶಾಸಕರ ಕಚೇರಿಗೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದು, ಆದರೆ ಕಚೇರಿಯಲ್ಲಿ ದದ್ದಲ್ ಇಲ್ಲದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಾಸ್ ಆಗಿದ್ದಾರೆ.

ಇನ್ನೊಂದೆಡೆ ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ದದ್ದಲ್ ಅವರ ರಾಯಚೂರು ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ನಾಗೇಂದ್ರ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್ ಗೂ ಇಡಿ ಸಂಕಷ್ಟ ಶುರುವಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular