ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಬಿಐ ಅಧಿಕಾರಿಗಳು ಬಿಜೆಪಿ ಮುಖಂಡರ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ.
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಉದ್ಯಮಿ ಕುಮಾರಸ್ವಾಮಿ ಹಾಗೂ ಮಗ ಬಳ್ಳಾರಿ ಪಾಲಿಕೆ ಬಿಜೆಪಿ ಸದಸ್ಯ ಗೋವಿಂದರಾಜುಲು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿರುವ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ ಗೋವಿಂದರಾಜುಲು ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದ ಆರೋಪಿ ನೆಕ್ಕಂಟಿ ನಾಗರಾಜ್ ನಿಂದ ಗೋವಿಂದರಾಜುಲು ಅವರಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿದೆ. ಹಣದ ವಹಿವಾಟು ಹಿನ್ನೆಲೆಯಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗದಲ್ಲಿ ಅಕ್ರಮ ಪ್ರಕರಣ ಸಂಬಂಧ ಈವರೆಗೆ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಬಿಜೆಪಿ ನಾಯಕರಿಗೂ ಸಂಕಷ್ಟ ಆರಂಭವಾಗಿದ್ದು, ಬಿಜೆಪಿ ಮುಖಂಡರ ಮನೆಗಳ ಮೇಲೂ ಇದೇ ಮೊದಲ ಬಾರಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.