HomeLatest NewsBREAKING: ಉದ್ಯಮಿ ಕುಮಾರಸ್ವಾಮಿ ಹಾಗೂ ಮಗ, ಬಿಜೆಪಿ ಕಾರ್ಪೊರೇಟರ್ ಗೋವಿಂದರಾಜಲು ಮನೆ ಮೇಲೆ CBI ದಾಳಿ

BREAKING: ಉದ್ಯಮಿ ಕುಮಾರಸ್ವಾಮಿ ಹಾಗೂ ಮಗ, ಬಿಜೆಪಿ ಕಾರ್ಪೊರೇಟರ್ ಗೋವಿಂದರಾಜಲು ಮನೆ ಮೇಲೆ CBI ದಾಳಿ

ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಬಿಐ ಅಧಿಕಾರಿಗಳು ಬಿಜೆಪಿ ಮುಖಂಡರ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಉದ್ಯಮಿ ಕುಮಾರಸ್ವಾಮಿ ಹಾಗೂ ಮಗ ಬಳ್ಳಾರಿ ಪಾಲಿಕೆ ಬಿಜೆಪಿ ಸದಸ್ಯ ಗೋವಿಂದರಾಜುಲು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿರುವ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ ಗೋವಿಂದರಾಜುಲು ನಿವಾಸದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಲ್ಮೀಕಿ ನಿಗಮದ ಹಗರಣದ ಆರೋಪಿ ನೆಕ್ಕಂಟಿ ನಾಗರಾಜ್ ನಿಂದ ಗೋವಿಂದರಾಜುಲು ಅವರಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿದೆ. ಹಣದ ವಹಿವಾಟು ಹಿನ್ನೆಲೆಯಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗದಲ್ಲಿ ಅಕ್ರಮ ಪ್ರಕರಣ ಸಂಬಂಧ ಈವರೆಗೆ ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಬಿಜೆಪಿ ನಾಯಕರಿಗೂ ಸಂಕಷ್ಟ ಆರಂಭವಾಗಿದ್ದು, ಬಿಜೆಪಿ ಮುಖಂಡರ ಮನೆಗಳ ಮೇಲೂ ಇದೇ ಮೊದಲ ಬಾರಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular