ಸಾಕ್ಷ್ಯಾನಾಶದ ಆರೋಪ ನಿರಾಧಾರ; ಯಾವುದೇ ತನಿಖೆಗೂ ಸಿದ್ದ: ಸಚಿವ ಶರಣ ಪ್ರಕಾಶ್ ಪಾಟೀಲ್ ಸವಾಲು

ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, , ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತು ಸಾಕ್ಷ್ಯ ನಾಶದ ಬಗ್ಗೆ ಸಚಿವರ ಕಚೇರಿಯಲ್ಲಿಯೇ ಸಭೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದರು. ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇನೆ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ಪ್ರಶ್ನಿಸಿದರು.

ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದ ಎದುರಿಸಲು ಸಿದ್ದನಿದ್ದೇನೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಯ ಮುಖವೂ ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ? ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ. ಯಾರೇ ತಪ್ಪೇ ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read