HomeKarnatakaBIG NEWS: ಪರಿಶಿಷ್ಟ ಪಂಗಡಗಳ ಪಟ್ಟಿಯಿಂದ ನಾಯಕ, ವಾಲ್ಮೀಕಿ ಕೈಬಿಡಲು ಹೈಕೋರ್ಟ್ ನಕಾರ: ಪಿಐಎಲ್ ವಜಾಗೊಳಿಸಿ...

BIG NEWS: ಪರಿಶಿಷ್ಟ ಪಂಗಡಗಳ ಪಟ್ಟಿಯಿಂದ ನಾಯಕ, ವಾಲ್ಮೀಕಿ ಕೈಬಿಡಲು ಹೈಕೋರ್ಟ್ ನಕಾರ: ಪಿಐಎಲ್ ವಜಾಗೊಳಿಸಿ ಆದೇಶ

ಬೆಂಗಳೂರು: ಪರಿಶಿಷ್ಟ ಪಂಗಡಗಳ(ST) ಪಟ್ಟಿಯಿಂದ ನಾಯಕ, ಬೇಡರ, ವಾಲ್ಮೀಕಿ, ತಳವಾರ ಸಮುದಾಯಗಳನ್ನು ಕೈಬಿಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಡಾ.ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸಹಾಯಕ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಸಾಂವಿಧಾನಿಕ ನಿಬಂಧನೆಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರ ಪ್ರಕಾರ ಯಾವೆಲ್ಲ ಸಮುದಾಯಗಳನ್ನು ಸೇರ್ಪಡೆ ಮಾಡಬೇಕು ಮತ್ತು ಕೈ ಬಿಡಬೇಕೆಂಬುದರ ಬಗ್ಗೆ ಶಾಸನ ರೂಪಿಸುವುದು ಸಂಸತ್ತಿನ ವಿಶೇಷ ಅಧಿಕಾರವಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular