HomeKarnataka500 ಕೋಟಿ ರೂ. ಬೆಲೆಬಾಳುವ ಅರಣ್ಯ ಭೂಮಿ ಪರಿವರ್ತನೆ: ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್...

500 ಕೋಟಿ ರೂ. ಬೆಲೆಬಾಳುವ ಅರಣ್ಯ ಭೂಮಿ ಪರಿವರ್ತನೆ: ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: 500 ಕೋಟಿ ರೂ. ಮೌಲ್ಯದ 18 ಎಕರೆ ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿಯಾಗಿ ಪರಿವರ್ತಿಸಿದ ಇಬ್ಬರು ಕೆಎಎಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.

ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್. ರವೀಂದ್ರ ಕುಮಾರ್ ಅವರು ಸಲ್ಲಿಸಿದ ದೂರು ಆಧರಿಸಿ ಬೆಂಗಳೂರು ಉತ್ತರ ತಾಲೂಕಿನ ಉಪ ವಿಭಾಗಾಧಿಕಾರಿ ಎಂ.ಜಿ. ಶಿವಣ್ಣ, ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ವಿರುದ್ಧ ಕೇಸ್ ದಾಖಲಿಸಲು ನ್ಯಾಯಾಲಯ ಪೂರ್ವಾನುಮತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಆರ್ ಪುರದ ಕೊತ್ತನೂರಿನ ಸರ್ವೆ ನಂಬರ್ 47ರ 17 ಎಕರೆ 34ಗುಂಟೆ ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿಯಾಗಿ ಪರಿವರ್ತಿಸಿ ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ನಿಯಮಗಳನ್ನು ಗಾಳಿಗೆ ತೂರಿರುವುದು ಅರಣ್ಯ ಇಲಾಖೆಯ ಗುಪ್ತಚರ ವಿಭಾಗದ ತನಿಖೆಯಲ್ಲೂ ದೃಢಪಟ್ಟಿದೆ. ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಭೂಮಿಯನ್ನು ಪರಿವರ್ತಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅನುಮತಿ ಅಗತ್ಯವಾಗಿದೆ. ಈ ಪ್ರಕರಣದಲ್ಲಿ ಭೂಮಿ ಕಬಳಿಕೆ ಉದ್ದೇಶದಿಂದ ಅರಣ್ಯ ಭೂಮಿಯನ್ನು ಪರಿವರ್ತನೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಶಿವಣ್ಣ ಮತ್ತು ಅಜಿತ್ ಕುಮಾರ್ ರೈ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲು ಪೂರ್ವಾನುಮತಿ ಪಡೆಯಬೇಕಿತ್ತು, ಅಪರಾಧ ದಂಡ ಸಂಹಿತೆ, ಭ್ರಷ್ಟಾಚಾರ ನಿಗ್ರಹದಳ ಕಾಯ್ದೆ ಅನ್ವಯ ಸರ್ಕಾರಿ ಸಿಬ್ಬಂದಿ ವಿರುದ್ಧ ವಿಚಾರಣಾ ಪ್ರಕ್ರಿಯೆ ಆರಂಭಿಸಲು ಸರ್ಕಾರದ ಪೂರ್ವ ಅನುಮತಿ ಕಡ್ಡಾಯವಾಗಿದ್ದು, ಪೂರ್ವಾನುಮತಿ ಕೋರಿ ಅರಣ್ಯ ಇಲಾಖೆ ನ್ಯಾಯಾಲಯದ ಮೊರೆ ಹೋಗಿದ್ದು, ಈಗ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular