ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.
