HomeIndiaBREAKING: ಶ್ರೀಶೈಲಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕ ಮೂಲದ ಮೂವರು ದುರ್ಮರಣ

BREAKING: ಶ್ರೀಶೈಲಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕ ಮೂಲದ ಮೂವರು ದುರ್ಮರಣ

ಕರ್ನೂಲ್: ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶ್ರೀಶೈಲಕ್ಕೆ ತೆರಳುತ್ತಿದ್ದ ಮೂವರು ಭಕ್ತರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನಾಗರ್ ಕರ್ನೂಲು ಜಿಲ್ಲೆಯಲ್ಲಿ ಸಂಭವಿಸಿದೆ.

ಇಲ್ಲಿನ ಉರ್ಕೊಂಡ ಮಂಡಲ್ ಪ್ರದೇಶದ ತಿಮ್ಮಣ್ಣಪಲ್ಲಿ ಬಳಿ ವ್ಯಾನ್ ಪಲ್ಟಿಯಾಗಿ ಬಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕ ಮೂಲದವರಾಗಿದ್ದು, ಕರ್ನಾಟಕದಿಂದ ಶ್ರೀಶೈಲಕ್ಕೆ ವ್ಯಾನ್ ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಮೂವರು ಸಾವನ್ನಪ್ಪಿದ್ದು, ವ್ಯಾನ್ ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದಿಂದ ಶ್ರೀಶೈಲಕ್ಕೆ ತೆರಳುತ್ತಿದ್ದಾಗ ವ್ಯಾನ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular