ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿತ್ತು. ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ನಾಲ್ವರಿಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ತನಿಖೆ ನಡೆಸಿದ್ದಾರೆ.