ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯುವ ಭಕ್ತರಿಗೆ ಹಾಗೂ ಕರ್ನಾಟಕ-ಆಂಧ್ರಪ್ರದೇಶ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕದ ಶಿವಮೊಗ್ಗ ಟೌನ್‌ನಿಂದ ಬೆಂಗಳೂರಿನ ಮೂಲಕ ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಗೆ ಹೊಸ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಆರಂಭಿಸುವ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿ ಮುಂದಿಟ್ಟಿದೆ.
ತಿರುಪತಿ ಸಂಸದ ಮದ್ದಿಲ ಗುರುಮೂರ್ತಿ ಅವರ ಮನವಿಗೆ ರೈಲ್ವೆ ಮಂಡಳಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಸೇವೆಗಾಗಿ ಅಧಿಕೃತ ಪ್ರಸ್ತಾವನೆಯನ್ನು ಕೂಡ ಸಿದ್ಧಪಡಿಸಲಾಗಿದೆ ಎಂದು ತಿಳಿದುಬಂದಿದೆ.
ತಿರುಪತಿಯಿಂದ ರೈಲು ಸಂಪರ್ಕವನ್ನು ವಿಸ್ತರಿಸಿ, ಸುಧಾರಿಸುವಂತೆ ಸಂಸದರು ಮಾಡಿದ ಮನವಿಯ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ರೂಪಿಸಿರುವ ಕಾರ್ಯಯೋಜನೆಯಲ್ಲಿ ಈ ಪ್ರಸ್ತಾವನೆಯನ್ನು ಸೇರಿಸಲಾಗಿದೆ. ಪ್ರಸ್ತಾವನೆಯನ್ನು ಪರಿಗಣಿಸಿದ್ದಕ್ಕಾಗಿ ರೈಲ್ವೆ ಮಂಡಳಿ ಅಧ್ಯಕ್ಷ ಹಾಗೂ ಸಿಇಒ ಅವರಿಗೆ ಗುರುಮೂರ್ತಿ ಧನ್ಯವಾದ ತಿಳಿಸಿದ್ದಾರೆ. ಉಳಿದಿರುವ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಶೀಘ್ರ ಪೂರ್ಣಗೊಳಿಸಿ, ಈ ರೈಲು ಸೇವೆಯನ್ನು ಶೀಘ್ರದಲ್ಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಪ್ರಸ್ತಾವಿತ ವಂದೇ ಭಾರತ್ ರೈಲು ತಿರುಪತಿ–ಶಿವಮೊಗ್ಗ–ಬೆಂಗಳೂರು ನಡುವಿನ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ನಿರೀಕ್ಷೆಯಿದೆ. ಇದರಿಂದ ಯಾತ್ರಿಕರ ಜೊತೆಗೆ ಶಿಕ್ಷಣ, ಆರೋಗ್ಯ ಸೇವೆ, ಉದ್ಯೋಗ ಹಾಗೂ ಇತರ ಅಗತ್ಯಗಳಿಗಾಗಿ ಪ್ರಯಾಣಿಸುವ ಜನರಿಗೂ ಅನುಕೂಲವಾಗಲಿದೆ.
ತಿರುಪತಿಗೆ ರೈಲು ಸಂಪರ್ಕವನ್ನು ವಿಸ್ತರಿಸಿ, ಮತ್ತಷ್ಟು ಸುಧಾರಿಸುವಂತೆ ತಿರುಪತಿ ಸಂಸದರು ಮಾಡಿದ ಮನವಿಯ ಮೇರೆಗೆ ನೈಋತ್ಯ ರೈಲ್ವೆ ರೂಪಿಸಿರುವ ಕಾರ್ಯಯೋಜನೆಯಲ್ಲಿ ಈ ಪ್ರಸ್ತಾವನೆಯನ್ನು ಸೇರಿಸಲಾಗಿದೆ. ಈ ಪ್ರಸ್ತಾವನೆಯನ್ನು ಪರಿಗಣಿಸಿದ್ದಕ್ಕಾಗಿ ರೈಲ್ವೆ ಮಂಡಳಿ ಅಧ್ಯಕ್ಷ ಹಾಗೂ ಸಿಇಒ ಅವರಿಗೆ ಸಂಸದ ಗುರುಮೂರ್ತಿ ಧನ್ಯವಾದ ತಿಳಿಸಿದ್ದಾರೆ.
ಕರ್ನಾಟಕದ ಶಿವಮೊಗ್ಗ ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ತೆರಳುವ ಸಾವಿರಾರು ಭಕ್ತರಿಗೆ ಪ್ರಯಾಣದ ಸಮಯ ಗಣನೀಯವಾಗಿ ಉಳಿತಾಯವಾಗುವ ಸಾಧ್ಯತೆಯಿದೆ.
ಅದೇ ರೀತಿ ಉನ್ನತ ಶಿಕ್ಷಣ, ವೈದ್ಯಕೀಯ ಸೇವೆ, ಉದ್ಯೋಗ ಹಾಗೂ ವ್ಯಾಪಾರ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಬೆಂಗಳೂರು ಮತ್ತು ತಿರುಪತಿ ನಡುವೆ ಸಂಚರಿಸುವ ಪ್ರಯಾಣಿಕರಿಗೆ ವೇಗದ ಹಾಗೂ ಆರಾಮದಾಯಕ ಸಾರಿಗೆ ವ್ಯವಸ್ಥೆ ದೊರೆಯಲಿದೆ.
ಶಿವಮೊಗ್ಗದಿಂದ ಬೆಂಗಳೂರಿನ ಮೂಲಕ ತಿರುಪತಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸುವ ಪ್ರಸ್ತಾವನೆ ರೈಲ್ವೆ ಮಂಡಳಿಯ ಮುಂದೆ ಬಂದಿದೆ. ಇದು ಜಾರಿಯಾದರೆ ಕರ್ನಾಟಕದ ಶಿವಮೊಗ್ಗ ಹಾಗೂ ಬೆಂಗಳೂರು ಭಾಗಗಳಿಂದ ತಿರುಮಲಕ್ಕೆ ತೆರಳುವ ಭಕ್ತರಿಗೆ ವೇಗದ ಮತ್ತು ಆರಾಮದಾಯಕ ಪ್ರಯಾಣದ ಅವಕಾಶ ಸಿಗುವ ನಿರೀಕ್ಷೆಯಿದೆ.
ಆಂಧ್ರಪ್ರದೇಶದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ತಿರುಪತಿ ಸಮೀಪದ ತಿರುಮಲ ಬೆಟ್ಟದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ದೇಶದ ಅತ್ಯಂತ ಪ್ರಸಿದ್ಧ ವೈಷ್ಣವ ಕ್ಷೇತ್ರಗಳಲ್ಲಿ ಒಂದಾಗಿದೆ. ಕೋಟ್ಯಂತರ ಭಕ್ತರು ಪ್ರತಿವರ್ಷ ಶ್ರೀವಾರಿಯ ದರ್ಶನಕ್ಕಾಗಿ ಇಲ್ಲಿಗೆ ಭೇಟಿ ನೀಡುತ್ತಾರೆ.

