HomeKarnatakaರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹುಬ್ಬಳ್ಳಿ - ಪುಣೆ 2ನೇ 'ವಂದೇ ಭಾರತ್ ರೈಲು'...

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹುಬ್ಬಳ್ಳಿ – ಪುಣೆ 2ನೇ ‘ವಂದೇ ಭಾರತ್ ರೈಲು’ ಸಂಚಾರ ಶೀಘ್ರ

ಹುಬ್ಬಳ್ಳಿ: ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಡಿದ ಮನವಿಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ –ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.

ಈ ಮೂಲಕ ಕೇಂದ್ರದಿಂದ ಮತ್ತೊಂದು ಕೊಡುಗೆ ಸಿಕ್ಕಿದೆ. ಶೀಘ್ರವೇ ಹುಬ್ಬಳ್ಳಿ –ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಹ್ಲಾದ್ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಶೀಘ್ರವೇ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular