HomeKarnatakaರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇನ್ನೊಂದು 'ವಂದೇ ಭಾರತ್' ರೈಲು: ಎರಡು ತಿಂಗಳಲ್ಲಿ ಪ್ರತಿ ರೈಲಿಗೂ...

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇನ್ನೊಂದು ‘ವಂದೇ ಭಾರತ್’ ರೈಲು: ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿ 2 ಜನರಲ್ ಬೋಗಿ ಅಳವಡಿಕೆ

ಮೈಸೂರು: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಲಭ್ಯವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿಯಾಗಿ ಎರಡು ಜನರಲ್ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಭಾರತ್ ರೈಲಿಗೆ ಜನರಲ್ ಬೋಗಿ ಸೇರ್ಪಡೆಯಿಂದ ಶ್ರೀ ಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ದೇಶಾದ್ಯಂತ ಹೊಸದಾಗಿ 13 ವಂದೇ ಭಾರತ್ ರೈಲು ಆರಂಭಿಸಲಾಗುತ್ತಿದ್ದು, ಮೂರು ತಿಂಗಳಲ್ಲಿ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು ಸಿಗುವ ಸಾಧ್ಯತೆ ಇದೆ. ತುಮಕೂರು, ಮೈಸೂರು, ಬೆಂಗಳೂರು ಕಡೆಗೆ ಮೂರು ಹೊಸ ಮೆಮು ರೈಲು ಆರಂಭಿಸಲಾಗುತ್ತದೆ. ಸೆಪ್ಟೆಂಬರ್ 27ರಂದು ತುಮಕೂರು -ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular