HomeKarnatakaವಂದೇ ಮಾತರಂ ಗೀತೆ 2 ಚರಣಕ್ಕೆ ಮೊಟಕು ವಿವಾದ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ...

ವಂದೇ ಮಾತರಂ ಗೀತೆ 2 ಚರಣಕ್ಕೆ ಮೊಟಕು ವಿವಾದ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ರಾಷ್ಟ್ರಗೀತೆಯನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್​​ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಕಾಯ್ದೆಯಿಂದ ಮಾಡಲಾಗದ್ದನ್ನು ರಾಜ್ಯಸರ್ಕಾರ ಆದೇಶದಿಂದ ಮಾಡಹೊರಟಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಂದೇ ಮಾತರಂ ಗೀತೆಯನ್ನು 2 ಚರಣಗಳಿಗೆ ಮೊಟಕುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಹೀಗೆ ಮಾಡಲು ರಾಜ್ಯ ಸರ್ಕಾರ ಅಧಿಕಾರವಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್​​ 8ರ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ವಲೀಕ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದಾರೆ.

ಸಚಿವ ಸಂಪುಟದ ನಿರ್ಣಯ ಆಧರಿಸಿ ರಾಜ್ಯ ಸರ್ಕಾರ ಈ ಬಗ್ಗೆ ಆದೇಶಿಸಿತ್ತು. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಆ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ ಎಂದೂ ಆದೇಶದಲ್ಲಿ ತಿಳಿಸಲಾಗಿತ್ತು.

ಸೆಪ್ಟೆಂಬರ್ 21ರಿಂದ ಮೂರು ದಿನ ವಿಶೇಷ ಅಧಿವೇಶನ: ಪ್ರಶ್ನೋತ್ತರಕ್ಕೆ ಅವಕಾಶವಿಲ್ಲ ಎಂದ ಸರ್ಕಾರ: ಸಿಡಿದೇಳಲು ಸಜ್ಜಾದ ವಿಪಕ್ಷಗಳು

ಬೆಂಗಳೂರು: ರಾಜ್ಯ ಸರ್ಕಾರ ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ಆದರೆ ಈ ಬಾರಿ ಅಧಿವೇಶನದಲ್ಲಿ ಯಾವುದೇ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿದೆ. ಆದರೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಲು ಸಜ್ಜಾಗಿವೆ.

ಭೀಕರ ಬರಗಾಲ, ಜನಜಾನುವಾರುಗಳಿಗೆ ನೀರಿನ ಅಭಾವ, ರೈತರ ಸಂಕಷ್ಟ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ನಡೆಯಲಿದೆ. ಕಸ್ತೂರಿ ರಂಗನ್ ವರದಿಗೆ ವಿರೋಧವಾಗಿ ಕೇಂದ್ರಕ್ಕೆ ಒಮ್ಮತದ ನಿರ್ಣಯ ಕಳುಹಿಸಲು ಸರ್ಕಾರ ಯೋಜಿಸಿದೆ.

ಯಾವುದೇ ಪ್ರಶ್ನೋತ್ತರ ಕಲಾಪವಿಲ್ಲದೆ ಕೇವಲ ಪ್ರಮುಖ ರೈತ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಈ ಅಧಿವೇಶನ ನಡೆಯಲಿದೆ. ಮಳೆಗಾಲದ ಅಧಿವೇಶನ ಯಾವುದೇ ಚರ್ಚೆಯಿಲ್ಲದೆ, ಪ್ರತಿಪಕ್ಷಗಳ ಪ್ರತಿಭಟನೆಗೆ ಕಲಾಪಗಳು ಬಲಿಯಾದವು. ಹೀಗಾಗಿ ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಜಾನುವಾರುಗಳ ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಚರ್ಚಿಸಲು ಸರ್ಕಾರ ಸೆಪ್ಟೆಂಬರ್ 21, 22 ಮತ್ತು 23 ರಂದು ವಿಶೇಷ ಅಧಿವೇಶನ ಕರೆದಿದೆ. ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿರುವ ತಾಲೂಕುಗಳ ಸ್ಥಿತಿಗತಿ ಹಾಗೂ ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಸದನದಲ್ಲಿ ವಿಸ್ತೃತವಾಗಿ ಸಂವಾದ ನಡೆಯಲಿದೆ.

ಅಧಿವೇಶನದಲ್ಲಿ ಚರ್ಚಿಸುವ ಪ್ರಮುಖ ಅಂಶಗಳು:

101 ತಾಲೂಕುಗಳಲ್ಲಿ ತೀವ್ರ ಬರ: ಕುಡಿಯುವ ನೀರು ಹಾಗೂ ಮೇವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ.

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ವಲಯದ ಜನರ ಹಿತರಕ್ಷಣೆಗಾಗಿ ಜಂಟಿ ವಿರೋಧ ನಿರ್ಣಯ.

ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವದಿಂದ ಈ ಬಗ್ಗೆ ಒಮ್ಮತದಿಂದ ತಿರಸ್ಕಾಅರ ನಿರ್ಣಯ ಕೈಗೊಳ್ಳುವುದು

ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕದ ಬಗ್ಗೆ ಸ್ಪಷ್ಟನೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆಗೆ ಒತ್ತಾಯ.

ಕಸ್ತೂರಿ ರಂಗನ್ ವರದಿ: ಕೇಂದ್ರಕ್ಕೆ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜನೆ

ಕಸ್ತೂರಿ ರಂಗನ್ ವರದಿಯಡಿ ಪಶ್ಚಿಮ ಘಟ್ಟದ ಶೇ 37 ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಇದನ್ನು ಈ ಹಿಂದೆಯೇ ತಿರಸ್ಕರಿಸಿರುವ ರಾಜ್ಯ ಸರ್ಕಾರ, ಈ ಅಧಿವೇಶನದಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು, ಕೃಷಿ ಹಾಗೂ ಮೂಲಸೌಕರ್ಯಕ್ಕೆ ಧಕ್ಕೆಯಾಗದಂತೆ ಕೇಂದ್ರಕ್ಕೆ ಜಂಟಿ ಸದನದ ಮೂಲಕ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜಿಸಿದೆ.

ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲದಿಂದ ಬರಗಾಲದ ಚರ್ಚೆ ನಡೆದಿರಲಿಲ್ಲ, ಹೀಗಾಗಿ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರೈತರ ಸದ್ಯದ ಬದುಕಿನ ಸವಾಲುಗಳ ಬಗ್ಗೆ ಚರ್ಚಿಸಲೇ ಈ ಅಧಿವೇಶನ ಮೀಸಲು ಮೀಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

ಅಧಿಶನದಲ್ಲಿ ಸರ್ಕಾಅರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ವಿದ್ಯುತ್ ಅಭಾವ, ಮೋಡ ಬಿತ್ತನೆ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಧಿವೇಶನ ಯಾವ ರೀತಿ ಇರಲಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. ಇನ್ನೊಂದೆಡೆ, ರಾಜ್ಯದಲ್ಲಿನ ವಿದ್ಯುತ್ ಅಭಾವ, 28 ಕೋಟಿ ರೂ. ವೆಚ್ಚದ ಮೋಡ ಬಿತ್ತನೆ ಯೋಜನೆಯ ವೈಫಲ್ಯ ಹಾಗೂ ಬಿಡದಿ ಟೌನ್ ಶಿಫ್, ನೈಸ್ ಟೋಲ್ ವಿಚಾರಗಳನ್ನು ಎತ್ತಲು ಯೋಜನೆ ರೂಪಿಸಿವೆ.

ಒಟ್ಟಾರೆ ಮೂರು ದಿನಗಳ್ ಅವಿಶೇಷ ಅಧಿವೇಶನದಲ್ಲಿ ಬರದಿಂದ ತತ್ತರಿಸಿರುವ ರೈತರ ಸಂಕಷ್ಟಕ್ಕೆ ಪರಿಹಾರ ಸಿಗಲಿದೆಯೇ? ಕಸ್ತೂರಿ ರಂಗನ್ ವರದಿ ವಿರೋಧಿಸಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಲಿದೆಯೇ ಕಾದುನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular