HomeKarnatakaರಾಜ್ಯದಲ್ಲಿ 'ವಂದೇ ಮಾತರಂ' ಪೂರ್ಣ ಹಾಡಬೇಕಿಲ್ಲ, ಎರಡು ಚರಣಗಳಷ್ಟೇ ಕಡ್ಡಾಯ: ಸರ್ಕಾರ ಆದೇಶ

ರಾಜ್ಯದಲ್ಲಿ ‘ವಂದೇ ಮಾತರಂ’ ಪೂರ್ಣ ಹಾಡಬೇಕಿಲ್ಲ, ಎರಡು ಚರಣಗಳಷ್ಟೇ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳ ಹೊರತುಪಡಿಸಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ರಾಷ್ಟ್ರೀಯಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಸಂಬಂಧ ರಾಜ್ಯ ಸರ್ಕಾರ ಆದೇಶಿಸಿದೆ.

ಕೇಂದ್ರ ಸರ್ಕಾರ ವಂದೇ ಮಾತರಂ 150ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದ್ದು, ಆಗಸ್ಟ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಂದೇ ಮಾತರಂ ಗೀತೆಯ ಕುರಿತು 1937 ರಲ್ಲಿ ಅಂಗೀಕರಿಸಿದ್ದ ತನ್ನ ನಿರ್ಣಯ ಪಾಲಿಸಲು ನಿರ್ಧರಿಸಲಾಗಿತ್ತು.

ಸರ್ಕಾರದ ಆದೇಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ “ವಂದೇ ಮಾತರಂ” ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ (Playing) ಮತ್ತು ಸಾಮೂಹಿಕ ಗಾಯನ (Mass Singing)ಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ತೀರ್ಮಾನದಂತೆ, ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ/03/HCR/2026 (ಭಾಗ-2), ಬೆಂಗಳೂರು, ໖: 08.09.2026.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮಾನ್ಯ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಈ ಮೂಲಕ ಆದೇಶಿಸಿದೆ.

ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು

​2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವುದು, ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ಹಾಗೂ ಅಪೌಷ್ಟಿಕತೆಯನ್ನು 5% ಕ್ಕಿಂತ ಕಡಿಮೆ ಮಾಡುವುದು ಸರ್ಕಾರದ ಪ್ರಮುಖ ‘ಮಹಾಸಂಕಲ್ಪ’ವಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

​ಇದಕ್ಕಾಗಿ ‘ನವಸಂಕಲ್ಪ’ದಡಿ ಆರೋಗ್ಯ, ಶಿಕ್ಷಣ ಹಾಗೂ ಮೇಕೆದಾಟು-ಎತ್ತಿನಹೊಳೆಯಂತಹ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡಲಾಗಿದೆ. ಮುಂಬರುವ 500 ದಿನಗಳಲ್ಲಿ ಮೂಲಸೌಕರ್ಯಕ್ಕಾಗಿ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹಾಗೂ ₹3 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ.

​ಜೊತೆಗೆ, 5 ಹೊಸ ಮಹಾನಗರಗಳ ನಿರ್ಮಾಣ, 1 ಲಕ್ಷ ಸರ್ಕಾರಿ ಹಾಗೂ 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ ಮತ್ತು ಬೆಂಗಳೂರಿನಲ್ಲಿ 5 ಹೊಸ ಲಾಲ್‌ಬಾಗ್ ಮಾದರಿಯ ಉದ್ಯಾನವನಗಳು ಹಾಗೂ 7 ಕೆರೆಗಳ ಪುನರುಜ್ಜೀವನಕ್ಕೆ ದೃಢ ಹೆಜ್ಜೆ ಇಡಲಾಗಿದೆ.

​ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ನಾಳಿನ ಭಾರತಕ್ಕೆ ಕರ್ನಾಟಕವನ್ನು ಮಾದರಿಯಾಗಿಸುವತ್ತ ಇದು ದಿಟ್ಟ ಹೆಜ್ಜೆಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular