BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ

ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಬೆಳಗಾವಿಯೆ ಭೇಟಿ ನೀಡಿದೆ.

ಸಂತ್ರಸ್ತ ಮಹಿಳೆ ಬೆಳಗಾವಿಯ ಭಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರ ತಂಡ ಭೇಟಿ ನೀಡಿದೆ.

ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗ್ ಡೂಪ್ ಅವರು ಭಿಮ್ಸ್ ಆಸ್ಪತ್ರೆಯ ಸಖಿ ಒನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ವೇಳೆ ಮಹಿಳೆ ಮಹಿಳಾ ಆಯೋಗದ ಸದಸ್ಯೆ ಬಳಿ ಕಣ್ಣೀರಿಟ್ಟಿದ್ದಾರೆ.

ಮಹಿಳಾ ಆಯೋಗದ ತಂಡಕ್ಕೆ ಜಿಲ್ಲಾಧಿಕರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತರು ಸಾಥ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read