BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಡಿಐಜಿ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬೆಳಗಾವಿಗೆ ಭೇಟಿ ನೀಡಿದೆ.

ಸಿಐಡಿ ಡಿಐಜಿ ಸುಧೀರ್ ಕುಮಾರ್, ಎಸ್ ಪಿ ಪೃಥ್ವಿಕ್, ರಶ್ಮಿ ಪರೆಡ್ಡಿ ಹಾಗೂ ಡಿವೈಎಸ್ ಪಿ ಅಂಜುಮಳ ನಾಯಕ್ ಸೇರಿದಂತೆ 6 ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದು, ಸಂತ್ರಸ್ತೆ ದಾಖಲಾಗಿರುವ ಭಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ಕ್ ಕುಮಾರ್ ಮೀನಾ ಕೂಡ ಸಂತ್ರಸ್ತೆ ಹಾಗೂ ಕುಟುಂಬದವರನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read