HomeKarnatakaBIG NEWS: ವಂಟಮೂರಿ ಕೇಸ್: ಸಂತ್ರಸ್ತ ಮಹಿಳೆ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್...

BIG NEWS: ವಂಟಮೂರಿ ಕೇಸ್: ಸಂತ್ರಸ್ತ ಮಹಿಳೆ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪರಿಹಾರದ ಚೆಕ್ ವಿತರಿಸಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ್ ಜಾರಕಿಹೊಳಿ, ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಚೆಕ್ ವಿತರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಸಚಿವರು, ಸಂತ್ರಸ್ತೆ ಕುಟುಬಕ್ಕೆ 5 ಲಕ್ಷ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದರು. ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular