HomeKarnatakaಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಅಕ್ರಮ: ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್

ಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಅಕ್ರಮ: ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್

ಹಾವೇರಿ: ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ತವ್ಯ ಲೋಪದ ಆರೋಪದ ಮೇಲೆ ಹೆಡ್‌ಕಾನ್ಸ್‌ಟೆಬಲ್‌ಗಳಾದ ಮರೆಣ್ಣವರ, ಹೊನ್ನಾಳಿ, ಮಣಕವಾಡ ಮತ್ತು ನಾಗನೂರು ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಪರೀಕ್ಷಾ ಕರ್ತವ್ಯದಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ನಾಲ್ವರು ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಓರ್ವ ಸಿಪಿಐ ಹಾಗೂ ಇಬ್ಬರು ಪಿಎಸ್‌ಐಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಾನಗಲ್ ಮೂಲದ ಶಂಕರ್ ಬನ್ನೂರು ಎಂಬಾತ ಮೊಬೈಲ್ ಬಳಸಿ ಪರೀಕ್ಷೆ ಬರೆದು 151 ಅಂಕ ಗಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈಗಾಗಲೇ ಶಂಕರ್ ಬನ್ನೂರು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಕರೆಗಳ ವಿವರ (CDR) ಪರಿಶೀಲಿಸಿ, ಪರೀಕ್ಷೆ ವೇಳೆ ಆತ ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಈ ಪ್ರಕರಣದ ತನಿಖೆಯನ್ನು ಹಾವೇರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಶಂಕರ್ ಬನ್ನೂರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದು ಹೇಗೆ? ಭದ್ರತಾ ಸಿಬ್ಬಂದಿ ಮತ್ತು ಪರೀಕ್ಷಾ ಮೇಲ್ವಿಚಾರಕರಿಂದ ಲೋಪವಾಗಿದೆಯೇ ಎಂಬ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮಾಕಾಂತ್ ಭಟ್, ಕೊಠಡಿ ಮೇಲ್ವಿಚಾರಕ ಬಸವರಾಜ ಸವದಿ, ಡ್ರೆಸ್‌ಕೋಡ್ ಅಧಿಕಾರಿ ರಾಜು ದುಂಡಪ್ಪನವರ ಹಾಗೂ ಪರೀಕ್ಷಾ ವೀಕ್ಷಕ ಶಿವಣ್ಣ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಸಂಸ್ಥೆಗೆ ಪತ್ರ ಬರೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular