ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ 88 ಕೇಂದ್ರಗಳು ಸೇರಿದಂತೆ ರಾಜ್ಯದ 1173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80ರಷ್ಟು ಮುಂದೆ ಪರೀಕ್ಷೆಗೆ ಹಾಜರಾಗಿದ್ದಾರೆ.

ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಪ್ರತಿ ಕೇಂದ್ರಗಳಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್, ವಸ್ತ್ರ ಸಂಹಿತೆ ಕಟ್ಟುನಿಟ್ಟಿನ ಪಾಲನೆ, ಅಭ್ಯರ್ಥಿಗಳನ್ನು ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಗಳಿಗೆ ಬಿಡುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ವಹಿಸಲಾಗಿತ್ತು.

ಎಲ್ಲಾ ಪರೀಕ್ಷಾ ಕೊಠಡಿಯ ಚಿತ್ರಣವನ್ನು ವೆಬ್ ಕಾಸ್ಟಿಂಗ್ ಮೂಲಕ ಬೆಂಗಳೂರಿನ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿನ ಕಮಾಂಡ್ ಸೆಂಟರ್ ನಲ್ಲಿ ಕುಳಿತು ವೀಕ್ಷಿಸಲಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read