HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ವರಲಕ್ಷ್ಮಿ ಶರತ್ ಕುಮಾರ್

ಹುಟ್ಟುಹಬ್ಬದ ಸಂಭ್ರಮದಲ್ಲಿ ವರಲಕ್ಷ್ಮಿ ಶರತ್ ಕುಮಾರ್

ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಇಂದು  ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆಕಂಡ ವಿಘ್ನೇಶ್ ಶಿವನ್  ನಿರ್ದೇಶನದ ‘ಪೋಡಾ ಪೋಡಿ’ ಎಂಬ ತಮಿಳು ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. 2014ರಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜೊತೆ ‘ಮಾಣಿಕ್ಯ’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟರು. ತಮಿಳು ಸೇರಿದಂತೆ ಕನ್ನಡ, ತೆಲುಗು, ಮತ್ತು ಮಲಯಾಳಂ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮತ್ತು ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಇತ್ತೀಚಿಗೆ ತೆಲುಗಿನ ‘ಹನುಮಾನ್’ ಚಿತ್ರದಲ್ಲಿ ಅಭಿನಯಿಸಿದ್ದರು. ‘ರಾಯನ್’ ‘ಕಲರ್ಸ್’ ಸೇರಿದಂತೆ ‘ಶಬರಿ’ ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿಮಾ ಕಲಾವಿದರು ವರಲಕ್ಷ್ಮಿ ಶರತ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಮೊನ್ನೆಯಷ್ಟೇ ನಿಖೋಲಯ್ ಸಚ್​ದೇವ್ ಅವರೊಂದಿಗೆ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಫೋಟೋಗಳನ್ನು instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

News18 Kannada

For Latest News Updates, Join Our Whatsapp Community🚩
RELATED ARTICLES

Most Popular