HomeIndiaBREAKING: ತಾಂತ್ರಿಕ ದೋಷ ಹಿನ್ನಲೆ ವಾರಣಾಸಿ –ಬೆಂಗಳೂರು ವಿಮಾನ ಕೊನೆ ಕ್ಷಣದಲ್ಲಿ ರದ್ದು: ರಾಜ್ಯದ ಪ್ರವಾಸಿಗರು...

BREAKING: ತಾಂತ್ರಿಕ ದೋಷ ಹಿನ್ನಲೆ ವಾರಣಾಸಿ –ಬೆಂಗಳೂರು ವಿಮಾನ ಕೊನೆ ಕ್ಷಣದಲ್ಲಿ ರದ್ದು: ರಾಜ್ಯದ ಪ್ರವಾಸಿಗರು ಅತಂತ್ರ

ವಾರಣಾಸಿ: ತಾಂತ್ರಿಕ ದೋಷದ ಕಾರಣದಿಂದ ವಾರಣಾಸಿ –ಬೆಂಗಳೂರು ವಿಮಾನ ಸಂಚಾರವನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಲಾಗಿದ್ದು, ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿದ್ದಾರೆ.

ಮೈಸೂರು, ಬೆಂಗಳೂರು ಸೇರಿ ಹಲವು ಕಡೆಯಿಂದ ಪ್ರವಾಸಕ್ಕೆ ತೆರಳಿದ್ದವರು ತೊಂದರೆಗೆ ಒಳಗಾಗಿದ್ದಾರೆ. ಸಂಜೆ 6.05ಕ್ಕೆ ಹೊರಡಬೇಕಿದ್ದ ವಿಮಾನ ಕೊನೆ ಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ರದ್ದುಪಡಿಸಲಾಗಿದೆ.

ವಾರಣಾಸಿಯಲ್ಲಿ ಮೈಸೂರಿನ 20ಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ. ಅಕ್ಟೋಬರ್ 12 ರಂದು ಕನ್ನಡಿಗರು ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದರು. ವಾರಣಾಸಿ ವಿಮಾನ ನಿಲ್ದಾಣದಲ್ಲಿ ಇರಲು ಸಿಬ್ಬಂದಿ ಅವಕಾಶ ನೀಡಿಲ್ಲ. ವಾರಣಾಸಿಯಲ್ಲಿ ನಾಳೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಲ್ಲಿ ಇರಲು ಸಿಬ್ಬಂದಿ ಅವಕಾಶ ನೀಡಿಲ್ಲ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ತೊಂದರೆಗೆ ಒಳಗಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular