Tiger Claw Case : ‘ವರ್ತೂರು ಸಂತೋಷ್’ ಗೆ ಸಿಕ್ತು ಬೇಲ್ : ಮತ್ತೆ ಬಿಗ್ ಬಾಸ್ ಗೆ ಎಂಟ್ರಿ..?

ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಬೇಲ್ ಸಿಕ್ಕಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ಜೈಲಿನಿಂದ ಹೊರ ಬಂದ ಬಳಿಕ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಹೋಗ್ತಾರಾ ಎಂಬ ಪ್ರಶ್ನೆ ಮೂಡಿದೆ.. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ವರ್ತೂರು ಸಂತೋಷ್ ಅವರ ಚಿಕ್ಕಪ್ಪ ರಮೇಶ್ ಜಾಮೀನು ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ತಮ್ಮ ಸೋದರಳಿಯನ ವಿರುದ್ಧ ಯಾರೋ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಪ್ರವೇಶಿಸುವ ಬಗ್ಗೆ ಕೇಳಿದಾಗ, ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಮತ್ತು ಸಂತೋಷ್ ಜೈಲಿನಿಂದ ಹೊರಬಂದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಮೇಶ್ ಹೇಳಿದರು.

ಯಾವುದೇ ನೋಟಿಸ್ ನೀಡದೆ ಏಕಾಏಕಿ ಬಂಧನ ಮಾಡಿದ್ದು ಸರಿಯಲ್ಲ, ನ್ಯಾಯಕ್ಕೆ ತಕ್ಕ ಜಯ ಸಿಕ್ಕಿದೆ ಎಂದು ಸಂತೋಷ್ ಪರ ವಕೀಲರು ಹೇಳಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ವರ್ತೂರು ಸಂತೋಷ್ ಬಳಿ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ ಎಂದು ಸಂತೋಷ್ ಪರ ವಕೀಲ ನಟರಾಜ್ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read