HomeKarnatakaತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ: ವರುಣಾದಲ್ಲಿ ಸಿದ್ದರಾಮಯ್ಯ ಎದುರು ವಿಜಯೇಂದ್ರ ಸ್ಪರ್ಧೆ...?

ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ: ವರುಣಾದಲ್ಲಿ ಸಿದ್ದರಾಮಯ್ಯ ಎದುರು ವಿಜಯೇಂದ್ರ ಸ್ಪರ್ಧೆ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದು ಖಚಿತವಾಗಿದೆ.

ಅಪ್ಪನಿಗಾಗಿ ಡಾ. ಯತೀಂದ್ರ ಕ್ಷೇತ್ರ ತ್ಯಾಗ ಮಾಡಿದ್ದು, ಸಿದ್ದರಾಮಯ್ಯ ವರುಣಾ ಜೊತೆಗೆ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಕಳೆದ ಚುನಾವಣೆಯಲ್ಲಿಯೂ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ. ಕಳೆದ ಚುನಾವಣೆಯಲ್ಲೇ ಅವರು ವರುಣಾದಲ್ಲಿ ಸ್ಪರ್ಧಿಸಲು ಒತ್ತಾಯ ಕೇಳಿಬಂದಿತ್ತು. ಆದರೆ, ಅವರು ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಈ ಕುರಿತಾಗಿ ಚರ್ಚೆ ನಡೆಸಿದ್ದಾರೆ. ವರುಣಾ ಸೇರಿದಂತೆ ಹಲವು ಕ್ಷೇತ್ರಗಳ ಬಗ್ಗೆ ಅಮಿತ್ ಶಾ ಅವರೊಂದಿಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಚರ್ಚಿಸಿದ್ದಾರೆ. ಆದರೆ ವಿಜಯೇಂದ್ರ ಸ್ಪರ್ಧೆಯ ವಿಚಾರವಾಗಿ ಅಲ್ಲ.

ಈ ಬಗ್ಗೆ ಮಾತನಾಡಿದ ವಿಜಯೇಂದ್ರ, ಕ್ಷೇತ್ರಗಳ ಸ್ಥಿತಿ ಗತಿಯ ಕುರಿತಾಗಿ ಮಾತನಾಡಿದ್ದೇವೆ. ನನ್ನ ಸ್ಪರ್ಧೆ ವಿಚಾರವಾಗಿ ಅಲ್ಲ. ಶಿಕಾರಿಪುರ ಜನರ ಬಯಕೆಯಂತೆ ಪ್ರಚಾರ ನಡೆಸುತ್ತಿದ್ದು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ವರುಣಾದಲ್ಲಿ ಸ್ಪರ್ಧಿಸುವ ಕುರಿತಾಗಿ ಕುತೂಹಲ ಮೂಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular