HomeKarnatakaBIG BREAKING: ಕೋಲಾರದಿಂದ ಹಿಂದೆ ಸರಿದ ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧೆ…?

BIG BREAKING: ಕೋಲಾರದಿಂದ ಹಿಂದೆ ಸರಿದ ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧೆ…?

ನವದೆಹಲಿ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ.

ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಕೋಲಾರದಿಂದ ಸ್ಪರ್ಧೆ ಮಾಡದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ನಿನ್ನೆ ನಡೆದ ಸಿಇಸಿ ಸಭೆಯಲ್ಲಿ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅವರು ವರುಣಾದಿಂದ ಸ್ಪರ್ಧಿಸುವುದು ನಿಶ್ಚಿತವೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular