HomeKarnatakaಸಿದ್ಧರಾಮಯ್ಯ ಎದುರು ಸ್ಪರ್ಧೆಗಿಳಿದ ಸಚಿವ ಸೋಮಣ್ಣಗೆ ಮೊದಲ ದಿನವೇ ಶಾಕ್: ವರುಣಾ ಕ್ಷೇತ್ರದಲ್ಲಿ ಬಂಡಾಯದ ಬಿಸಿ

ಸಿದ್ಧರಾಮಯ್ಯ ಎದುರು ಸ್ಪರ್ಧೆಗಿಳಿದ ಸಚಿವ ಸೋಮಣ್ಣಗೆ ಮೊದಲ ದಿನವೇ ಶಾಕ್: ವರುಣಾ ಕ್ಷೇತ್ರದಲ್ಲಿ ಬಂಡಾಯದ ಬಿಸಿ

ಮೈಸೂರು: ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎದುರು ಸ್ಪರ್ಧೆಗಿಳಿದ ಸಚಿವ ವಿ. ಸೋಮಣ್ಣ ಅವರಿಗೆ ಮೊದಲ ದಿನವೇ ಬಂಡಾಯದ ಬಿಸಿ ತಟ್ಟಿದೆ.

ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಹಾಗೂ ವರುಣಾ ಕ್ಷೇತ್ರದ ಹಿರಿಯ ಮುಖಂಡ ತೋಟದಪ್ಪ ಬಸವರಾಜು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವರುಣದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಸೋಮಣ್ಣಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1980 ರಿಂದ ಸಂಘ ಪರಿವಾರದ ಸ್ವಯಂಸೇವಕ ಮತ್ತು ಕಾರ್ಯಕರ್ತರನಾಗಿ ದುಡಿದಿದ್ದೇನೆ. ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಭರವಸೆ ಹೊಂದಿದ್ದೆ. 40 ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ದುಡಿದಿದ್ದರೂ ನನ್ನನ್ನು ಪರಿಗಣಿಸದ ಕಾರಣ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತೋಟದಪ್ಪ ಬಸವರಾಜು ತಿಳಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 37,819 ಮತ ಪಡೆದಿದ್ದೇನೆ. ಈ ಬಾರಿ ಗೆಲ್ಲುವ ವಿಶ್ವಾಸವಿತ್ತು. ಆದರೆ ನನಗೆ ಟಿಕೆಟ್ ನಿರಾಕರಿಸಿದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular