HomeKarnatakaಬಿಜೆಪಿ ಟಿಕೆಟ್ ಬಗ್ಗೆ ಸಚಿವ ಸೋಮಣ್ಣ ಮುಖ್ಯ ಮಾಹಿತಿ: ಒಂದು ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ

ಬಿಜೆಪಿ ಟಿಕೆಟ್ ಬಗ್ಗೆ ಸಚಿವ ಸೋಮಣ್ಣ ಮುಖ್ಯ ಮಾಹಿತಿ: ಒಂದು ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ

ತುಮಕೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ವರುಣಾದಲ್ಲಿ ಸ್ಪರ್ಧಿಸುತ್ತೇನೆ ಎಂದು ಯಾರು ಹೇಳಿದ್ದು? ಆ ರೀತಿ ಯಾವುದೂ ಇಲ್ಲ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಚಿವ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಪಕ್ಷದ ವರಿಷ್ಠರಿಗೆ ಇದು ಒಂದು ರೀತಿಯ ಪ್ರತಿಷ್ಠಿತ ಚುನಾವಣೆಯಾಗಿದೆ. ಯಾರನ್ನು ಎಲ್ಲಿ ಕಣಕ್ಕಿಳಿಸಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಇನ್ನೊಂದು ಗಂಟೆಯಲ್ಲಿ ಎಲ್ಲದಕ್ಕೂ ಉತ್ತರ ಸಿಗುತ್ತದೆ. ಒಂದು ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ. ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರನಿಗೆ ಟಿಕೆಟ್ ಬಿಟ್ಟು ಕೊಟ್ಟಿದ್ದಾರೆ. ಕಾರಜೋಳ, ಎಂಟಿಬಿ ನಾಗರಾಜ್ ಸೇರಿದಂತೆ ಐದಾರು ಜನ ಇದ್ದಾರೆ ಎಂದರು.

ಗೆಲ್ಲಲು ಸಾಧ್ಯತೆ ಇರುವ ಕ್ಷೇತ್ರಗಳೆಲ್ಲ ಕಾಂಗ್ರೆಸ್ ತೆಕ್ಕೆಯಲ್ಲಿವೆ. ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಮುಖಂಡರೆಲ್ಲ ಕೆಲಸ ಮಾಡುತ್ತಾರೆ. ಪುತ್ರನಿಗೆ ಕೊಟ್ಟರೆ ಸಂತೋಷ, ಕೊಡದೆ ಹೋದರೂ ತೊಂದರೆ ಇಲ್ಲ. ಯಾವತ್ತೂ ಕೂಡ ಚುನಾವಣೆ ಇದೆ ಎಂದು ನಾನು ಕೆಲಸ ಮಾಡಿಲ್ಲ. ಸಿದ್ದಗಂಗಾ ಮಠ ಭೇಟಿಗೂ ಟಿಕೆಟ್ ಯಾವುದೇ ಸಂಬಂಧವಿಲ್ಲ ಎಂದು ಸೋಮಣ್ಣ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular