ಕ್ಷುಲ್ಲಕ ಕಾರಣಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಗೆ ಥಳಿತ: ವಿಡಿಯೋ ವೈರಲ್​

ಮಗುವನ್ನು ಎತ್ತಿಕೊಂಡು ಹೋಗ್ತಿದ್ದ ಮಹಿಳೆಗೆ ಥಳಿಸಿದಂತಹ ಮನಕಲುಕುವ ವಿಡಿಯೋವೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮಗುವನ್ನು ಎತ್ತಿಕೊಂಡಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಥಳಿಸುತ್ತಿರೋದನ್ನು ಕಾಣಬಹುದಾಗಿದೆ.

ಮುಂಬೈನ ವಸಾಯಿ ಎಂಬ ಪ್ರದೇಶದಲ್ಲಿ ನಡೆದ ಘಟನೆ ಇದಾಗಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಘಟನೆಯೊಂದು ಈ ಹಂತಕ್ಕೆ ತಲುಪಿದೆ ಎನ್ನಲಾಗಿದೆ.

ವಸಾಯಿ ರಸ್ತೆಯ ಸ್ಟೇಷನ್​ ಪ್ರದೇಶದ ಸುತ್ತಲೂ ಅಳವಡಿಸಲಾದ ಕ್ಯಾಮರಾಗಳಲ್ಲಿ ದಾಖಲಾಗಿರುವ ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೂದಲನ್ನು ಹಿಡಿದೆಳೆದಿದ್ದು ಮಾತ್ರವಲ್ಲದೇ ಆಕೆಗೆ ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯವನ್ನು ನೋಡುತ್ತಿದ್ದ ಮಗು ಚೀರುತ್ತಿರೋದನ್ನು ಕಾಣಬಹುದಾಗಿದೆ.

ಇದಾದ ಬಳಿಕ ಪುರುಷರ ಗುಂಪೊಂದು ಮಹಿಳೆಯನ್ನು ಥಳಿಸಿದ್ದಕ್ಕೆ ವ್ಯಕ್ತಿಗೆ ಅಡ್ಡಿಪಡಿಸಿದೆ ಹಾಗೂ ಆತನಿಗೆ ಥಳಿಸಿದ್ದಾರೆ. ಈ ದೃಶ್ಯ ಕೂಡ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸದ್ಯಕ್ಕಿರುವ ಮಾಹಿತಿಯ ಪ್ರಕಾರ, ವ್ಯಕ್ತಿಯು ಸಣ್ಣ ವಿಷಯಕ್ಕೆ ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸಿದ್ದಾನೆ ಹಾಗೂ ಇದು ಬಳಿಕ ದೈಹಿಕ ಹಿಂಸೆಗೆ ತಿರುಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read