ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮುತ್ತಿಗೆ ಹಾಕುವ ನಿಟ್ಟಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಮುನ್ನುಗ್ಗುತ್ತಿದ್ದರು. ಈ ವೇಳೆ ಬಾಗಲೂರು ಬಳಿ ಪೊಲೀಸರು ವಾಟಾಳ್ ನಾಗರಾಜ್ ಅವರ ಕಾರನ್ನು ತಡೆದು ಅವರನ್ನು ವಶಕ್ಕೆ ಪಡೆದಿದ್ದಾರೆ.
ಇಂಡಿಗೋ ವಿಮಾನ ಹಾರಾಟದಲ್ಲಿ ಕೆಲ ದಿನಗಳಿಂದ ಭಾರಿ ವ್ಯತ್ಯಯವುಂಟಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಾಟಾಳ್ ನಾಗರಾಜ್, ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
