HomeKarnatakaವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ಕೆಆರ್‌ಎಸ್‌ ಮುಖ್ಯ ದ್ವಾರದ ಬಳಿ ಬ್ಯಾರಿಕೇಡ್ ಹಾಕಿ ಹೋರಾಟಗಾರರನ್ನು ತಡೆಯಲಾಗಿದೆ. ಮಹಾರಾಜರ ಮನೆಯವರನ್ನು ಜಲಾಶಯದ ಒಳಗೆ ಬಿಟ್ಟಿದ್ದೀರಿ. ನಮ್ಮನ್ನು ಏಕೆ ಬಿಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ನಿಷೇಧಿತ ಪ್ರದೇಶ ಎಂದು ಪೊಲೀಸರು ಸಬೂಬು ಹೇಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರ ಹರಿದು ಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular