ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರು, ಪರರಾಜ್ಯದ ಪುಂಡರ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಶನಿವಾರ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದೇ ವೇಳೆ ಕನ್ನಡಿಗ ನಟ ಶಿವಾಜಿ ಪಾತ್ರ ಮಾಡಿದರೆ ಸಿನಿಮಾ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್, ಶಿವಸೇನೆಯನ್ನು ನಿಷೇಧ ಮಾಡಬೇಕು. ಬೆಳಗಾವಿ ನಮ್ಮದು. ಬೆಳಗಾವಿಯಲ್ಲಿ ಶಿವಾಜಿ, ಸಂಭಾಜಿ ಪ್ರತಿಮೆ ಬೇಕಾ? ಎಂದು ಪ್ರಶ್ನಿಸಿದರು.
ಇದೇ ವೇಳೆ ಕನ್ನಡಿಗ ನಟ ಶಿವಾಜಿ ಪಾತ್ರ ಮಾಡಿದರೆ ಸಿನಿಮಾವನ್ನೇ ಬಹಿಷ್ಕರಿಸುತ್ತೇವೆ ಎಂದು ಹೇಲುವ ಮೂಲಕ ನಟ ರಿಷಬ್ ಶೆಟ್ಟಿ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಪರಭಾಷಿಗರು ಕನ್ನಡಿಗರ ಮೇಲೆ ದರ್ಪ, ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿದ್ದು ಕನ್ನಡಿಗರ ಮೇಲೆ ಹಲ್ಲೆ ನಡೆಸುವವರು ರಾಜ್ಯ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.