HomeKarnataka5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವದಿನ ಸೃಷ್ಟಿಗೆ ಅವಕಾಶ: ಗುಳೆ ಹೋಗುವ ಅಗತ್ಯವಿಲ್ಲ...

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವದಿನ ಸೃಷ್ಟಿಗೆ ಅವಕಾಶ: ಗುಳೆ ಹೋಗುವ ಅಗತ್ಯವಿಲ್ಲ ಎಂದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಗೆ ಹಣದ ಕೊರತೆ ಇಲ್ಲ. ಪ್ರಥಮ ತ್ರೈಮಾಸಿಕಕ್ಕೆ 2900 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ ಮೊದಲ ತ್ರೈಮಾಸಿಕಕ್ಕೆ 1700 ಕೋಟಿ ರೂ., ರಾಜ್ಯ ಸರ್ಕಾರ 1200 ಕೋಟಿ ಹಣವನ್ನು ನೀಡಿದೆ. ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ, ಕೆರೆ ಕಾಲುವೆ ಅಭಿವೃದ್ಧಿ, ಚೆಕ್ ಡ್ಯಾಂ ಇತ್ಯಾದಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಉದ್ಯೋಗ ಕೇಳಿ ಬರುವ ಪ್ರತಿಯೊಬ್ಬರಿಗೂ, ಇರುವಲ್ಲೇ ಉದ್ಯೋಗ ನೀಡುವಂತೆ ಸಿಇಓಗಳಿಗೆ ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ತೀರಾ ಅಗತ್ಯವಿದ್ದರೆ ಕೊಳವೆ ಬಾವಿ ಕೊರೆಸಿ:

ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ. ಲಭ್ಯವಿದ್ದು, ಹಣಕಾಸಿನ ಕೊರತೆ ಇಲ್ಲ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 117 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಘೋಷಿಸಿದ್ದು ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದರು.

ಸಾಂಪ್ರದಾಯಿಕ ಜಲ ಮೂಲ ಬತ್ತಿ ಹೋಗಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಪೂರೈಕೆಗೆ ತೊಡಕಾಗದಂತೆ ಪರ್ಯಾಯ ಜಲ ಮೂಲ ಗುರುತಿಸಲು, ಖಾಸಗಿ ಕೊಳವೆಬಾವಿ, ತೆರೆದ ಬಾವಿ ಬಾಡಿಗೆಗೆ ಪಡೆದು, ನೀರು ಪರೀಕ್ಷಿಸಿ, ಟ್ಯಾಂಕರ್ ಮೂಲಕ ನೀರು ಪೂರೈಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜನರ ಸಂಕಷ್ಟ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಿ, ಅದಕ್ಕೆ ಪಂಪ್ ಸೆಟ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದು ನಿರ್ದೇಶನ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular