HomeKarnataka'ಕರ್ನಾಟಕ ವೀರಶೈವ ಲಿಂಗಾಯತ' ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

‘ಕರ್ನಾಟಕ ವೀರಶೈವ ಲಿಂಗಾಯತ’ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2026-27ನೇ ಸಾಲಿನ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಕಾಯಕ ಕಿರಣ (ಸ್ವಯಂ ಉದ್ಯೋಗ ನೇರ ಸಾಲ ಯೋಜನೆ), ಜೀವಜಲ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಬಸವ ಬೆಳಗು (ಅರಿವು ಶೈಕ್ಷಣಿಕ ಸಾಲ ಯೋಜನೆ)- ಹೊಸತು ಮತ್ತು ನವೀಕರಣ, ವಿದೇಶಿ ವಿದ್ಯಾವಿಕಾಸ (ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ) ಬಡ್ಡಿರಹಿತ ಸಾಲ ಯೋಜನೆ ಸ್ವಾವಲಂಬಿ ಸಾರಥಿ ಯೋಜನೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25 ಮತ್ತು 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ-ಧಾರವಾಡ-ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೆಪ್ಟೆಂಬರ್ 30, 2026 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ https://kvldcl.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ಸಹಾಯವಾಣಿ ಸಂಖ್ಯೆ:0836-2957829 ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2026-27 ನೇ ಸಾಲಿಗೆ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ವಿದೇಶಿ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆ, ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆ, ಸಾಂತ್ವನ ಯೋಜನೆ, ಸಿಖ್‌ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ನವೋದಯ ಯೋಜನೆ, ಫಾಸ್ಟ್ಫುಡ್ ಟ್ರಕ್/ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ ಯೋಜನೆಯಡಿ www.kmdconline.karnataka.gov.in ಮೂಲಕ ಸೆ.17 ರೊಳಗಾಗಿ ಅರ್ಜಿ ಸಲ್ಲಿಸುವುದು.

ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಶ್ರಮಶಕ್ತಿ ಸಾಲ ಯೋಜನೆಯಡಿಯಲ್ಲಿ ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ಮಿತಿ ರೂ.6 ಲಕ್ಷದೊಳಗಿರಬೇಕು. ಸಾಂತ್ವನ ಯೋಜನೆಯಲ್ಲಿ ಕುಟುಂಬ ವಾರ್ಷಿಕ ಆದಾಯ ರೂ.8 ಲಕ್ಷದದೊಳಗಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಗ್ರಾಮೀಣ ಪ್ರದೇಶದವರಿಗೆ ರೂ.96000 ವಾರ್ಷಿಕ ಆದಾಯ ಇರಬೇಕು. ಅರ್ಜಿದಾರರು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಗಳಡಿಯಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈಗಾಗಲೇ ಸಾಲಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಬ್ಯಾಂಕ್ ಖಾತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಚ್ಯುತರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ :08182-228262 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular