ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲೇ ಮೊದಲು: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಜೈನಮುನಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಖಂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಿದೆ. ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂದು ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನವಾಗಿರುವುದಾಗಿ ತಿಳಿದು ಬಂದಿದ್ದು, ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು. ಮುನಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read