ಬೆಂಗಳೂರು: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಮತ್ತೆ 6 ದಿನಗಳ ಕಾಲ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ವೀರೇಂದ್ರ ಪಪ್ಪಿ ಅವರ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಮತ್ತಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಇಡಿ ಅಧಿಕಾರಿಗಳ ಮನವಿ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಮತ್ತೆ 6 ದಿನಗಳ ಕಾಲ ವೀರೇಂದ್ರ ಪಪ್ಪಿ ಅವರನ್ನು ಕಶ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಇದೇ ವೇಳೆ ವೀರೇಂದ್ರ ಪಪ್ಪಿ ಅವರಿಗೆ ನಿದ್ದೆಗೆ ಸಮಯ ನೀಡಬೇಕು. ಮೂಲಸೌಕರ್ಯ ಒಡಗಿಸಬೇಕು. ಶುದ್ಧ ಕುಡಿಯುವ ನೀರು, ವಿಶ್ರಾಂತಿಗೆ ಅವಕಾಶ ನೀಡಬೇಕು. ಪ್ರತಿದಿನ 30 ನಿಮಿಷ ವಕೀಲರ ಭೇಟಿಗೆ ಅವಕಾಶ ಕೊಡಬೇಕು ಎಂದು ಇಡಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.