HomeKarnatakaSHOCKING: ರಸ್ತೆ ಬದಿ ನಿಲ್ಲಿಸಿದ್ದ ವಾಹನದಲ್ಲಿ ಯುವಕ ಶವವಾಗಿ ಪತ್ತೆ

SHOCKING: ರಸ್ತೆ ಬದಿ ನಿಲ್ಲಿಸಿದ್ದ ವಾಹನದಲ್ಲಿ ಯುವಕ ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ವಾಹನದಲ್ಲಿ ಯುವಕನ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದೆ.

ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ ಎಂದು ಹೇಳಲಾಗಿದೆ. ಮೂರ್ಛೆ ರೋಗದಿಂದ ಅಸ್ವಸ್ಥಗೊಂಡು ಸಲ್ಮಾನ್ ಬೊಲೆರೋ ವಾಹನದಲ್ಲಿ ಕುಳಿತಿದ್ದ. ಈ ವೇಳೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಾಹನದ ಮಾಲೀಕ ಬಂದು ನೋಡಿದಾಗ ಸಲ್ಮಾನ್ ಮೃತಪಟ್ಟಿರುವುದು ಗೊತ್ತಾಗಿದೆ. ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾವಿನ ಕುರಿತಾಗಿ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular