HomeLatest NewsBIG NEWS: 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ

BIG NEWS: 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಟೆಂಬರ್ 12ರಂದು ಅನುಮೋದನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ:04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೋರ್ಟಲ್ ನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (Registered Vehicle Scrapping Facility) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರೀಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರೀಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular