ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ, 4 ಮೆಟ್ರೋ ನಿಲ್ದಾಣಗಳಿಗೆ ಪ್ರವೇಶವಿಲ್ಲ

ಬೆಂಗಳೂರು: ಮೆಟ್ರೋ ರೈಲು ಮಾರ್ಗ 3 ಸಂಚಾರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವೆಡೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಳದಿ ಮೆಟ್ರೋ ಉದ್ಘಾಟನೆಗೆ ಆಗಮಿಸಲಿದ್ದಾರೆ. ಅವರು ಸಂಚರಿಸುವ ಮಾರ್ಗದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2:30ರವರೆಗೆ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಂಟಿ ಆಯುಕ್ತ ಸಂಚಾರ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ಕೆಲವು ರಸ್ತೆಗಳಿಗೆ ಪರ್ಯಾಯ ಮಾರ್ಗ ತಲುಪಿಸಲಾಗಿದೆ.

ಬೆಳಗ್ಗೆ ಶೇಷಾದ್ರಿ ರಸ್ತೆಯಲ್ಲಿ ಕೆಆರ್ ಸರ್ಕಲ್ ವರೆಗೆ ಸಾರ್ವಜನಿಕರಿಗೆ ಸಂಚಾರ ನಿರ್ಬಂಧವಿರುತ್ತದೆ. ಲಾಲ್ ಬಾಗ್ ನಲ್ಲಿ ಉತ್ತರ ಹಾಗೂ ಪಶ್ಚಿಮ ದ್ವಾರ ಬಂದ್ ಮಾಡುವಂತೆ ಸೂಚಿಸಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಭಾರಿ ವಾಹನಗಳು ರಾತ್ರಿ 11:30ರ ವರೆಗೆ ಒಳಗೆ ಪ್ರವೇಶಿಸುವಂತಿಲ್ಲ.

ಹೊಸೂರು ರಸ್ತೆ ಹಾಗೂ ನಯಿಸ್ ರಸ್ತೆಗಳಲ್ಲಿ ಭಾನುವಾರ ಕೆಲವೊತ್ತು ಸಾರ್ವಜನಿಕರ ಹೋರಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.

ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಹೊಸೂರು ರಸ್ತೆ ಬೊಮ್ಮಸಂದ್ರ ಜಂಕ್ಷನ್‌ನಿಂದ ಜಿಗಣಿ ರಸ್ತೆ ಮುಖಾಂತರ ಬನ್ನೇರುಘಟ್ಟ ರಸ್ತೆಯಲ್ಲಿ ನೈಸ್‌ರಸ್ತೆಗೆ ಸಾಗಬಹುದು.

ನೈಸ್ ರಸ್ತೆಯಿಂದ ಹೊಸೂರು ಕಡೆಗೆ ಸಂಚರಿಸುವ ವಾಹನಗಳು ಬನ್ನೇರುಘಟ್ಟ ಜಂಕ್ಷನ್‌ನಲ್ಲಿ ಜಿಗಣಿ ರಸ್ತೆ ಮುಖಾಂತರ ಬೊಮ್ಮಸಂದ್ರ ಜಂಕ್ಷನ್ ಹೊಸೂರು ರಸ್ತೆಯನ್ನು ತಲುಪಬಹುದು.

ಹೊಸೂರು ರಸ್ತೆಯಿಂದ ಸರ್ಜಾಪುರ ರಸ್ತೆ, ವರ್ತೂರು, ವೈಟ್‌ಫೀಲ್ಡ್, ಹೊಸಕೋಟೆ ಕಡೆಗೆ ಸಂಚರಿಸುವ ವಾಹನಗಳು ಚಂದಾಪುರ ಜಂಕ್ಷನ್ ನಿಂದ ದೊಮ್ಮಸಂದ್ರ ರಸ್ತೆ ಮುಖಾಂತರ ಸರ್ಜಾಪುರ ರಸ್ತೆ ಸಾಗಬಹುದು.

ಹೆಚ್‌ಎಸ್‌ಆರ್‌ಲೇಔಟ್, ಕೋರಮಂಗಲ, ಬೆಳ್ಳಂದೂರು, ವೈಟ್‌ಫೀಲ್ಡ್ ಹಾಗೂ ನಗರದ ಕಡೆಯಿಂದ ಹೊಸೂರು ಕಡೆಗೆ ಸಂಚರಿಸುವ ವಾಹನಗಳು ಸರ್ಜಾಪುರ ರಸ್ತೆ ಮೂಲಕ ಚಂದಾಪುರ ತಲುಪಿ ಹೊಸೂರು ಕಡೆಗೆ ಹೋಗಬಹುದು.

ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಮೇಲ್ಲೇತುವೆ, ಎಲೆಕ್ಟ್ರಾನಿಕ್ ಸಿಟಿ 1ನೇ ಹಂತದ ಮಾರ್ಗಗಳ ಬಳಕೆ ಯನ್ನು ತಪ್ಪಿಸಿ ಬದಲಿ ಮಾರ್ಗಗಳಲ್ಲಿ ಸಾಗಬೇಕು.

4 ಮೆಟ್ರೋ ನಿಲ್ದಾಣಕ್ಕೆ 2 ತಾಸು ಪ್ರವೇಶವಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಳದಿ ಮಾರ್ಗ ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ ಕೆಲವೆಡೆ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆ‌ರ್.ವಿ.ರಸ್ತೆ ಮೆಟ್ರೋ ನಿಲ್ದಾಣಗಳನ್ನು ಜನರ ಪ್ರವೇಶ, ನಿರ್ಗಮನಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read