ಬೆಂಗಳೂರು: ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆಯು ನ.3ರಿಂದ ಕಲಾವಿದರು ಮತ್ತು ಸಾರ್ವಜನಿಕರ ಕಲಾ ಪ್ರದರ್ಶನಕ್ಕೆ ಮುಕ್ತವಾಗಲಿದೆ.
ಕಟ್ಟಡ ನವೀಕರಣದ ಕಾರಣ ವೆಂಕಟಪ್ಪ ಚಿತ್ರಶಾಲೆಯಲ್ಲಿ ಕಲಾ ಪ್ರದರ್ಶನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಟ್ಟಡವನ್ನು ನವೀಕರಣಗೊಳಿಸಲಾಗಿದ್ದು, ಚಿತ್ರಶಾಲೆಯ ಒಂದು ಸುಸಜ್ಜಿತ ಸಭಾಂಗಣ, ಪ್ರತ್ಯೇಕ ಮೂರು ಗ್ಯಾಲರಿಗಳು ಮತ್ತು ಚಿತ್ರಶಾಲೆಯ ಹೊರಾಂಗಣ ಸ್ಥಳಗಳನ್ನು ಬಾಡಿಗೆಗೆ ನೀಡಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆ ಬಗ್ಗೆ ಸಿದ್ಧತೆ ನಡೆಯುತ್ತಿದ್ದು, ಸದ್ಯದಲ್ಲಿಯೇ ಅಂತಿಮಗೊಳ್ಳಲಿದೆ. ಅಲ್ಲಿಯವರೆಗೆ ಆಸಕ್ತ ಕಲಾವಿದರು, ಸಾರ್ವಜನಿಕರು ಹಾಗೂ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳು ವೆಂಕಟಪ್ಪ ಚಿತ್ರಶಾಲೆಗೆ ಭೇಟಿ ನೀಡಿ, ಗ್ಯಾಲರಿಗಳನ್ನು ಕಾಯ್ದಿರಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎಲ್.ಗೌಡ ಅವರ 8105001151 ಕರೆ ಮಾಡಿ ಅಥವಾ ಇ ಮೇಲ್ ವಿಳಾಸ asstdirectorgovtmuseum@gmail.com ಮೂಲಕವೂ ಸಂಪರ್ಕಿಸಬಹುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		