HomeKarnatakaವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಉಡುಪಿ: ಭಜನಾ ಸಪ್ತಾಹ ಕಾರ್ಯಕ್ರಮಕ್ಕೆಂದು ಬಂದು ವೆಂಕಟರಮಣ ದೇವಾಲಯದ ಕೆರೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ತಿರುವ ದಾರುಣ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿ ನಡೆದಿದೆ.

ಮೃತನನ್ನು ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ್ (13) ಎಂದು ಗುರುತಿಸಲಾಗಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ.

ಕೆರೆಯಲ್ಲಿ ಈಜಲೆಂದು ಅಕ್ಕನ ಮಗನ ಜೊತೆ ಕೆರೆಗೆ ಇಳಿದಿದ್ದ. ಆದರೆ ಆದಿತ್ಯನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ಸುಮಾರು 20 ಅಡಿ ಆಳದ ಕೆರೆಯಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಳುಗುತಜ್ಞ ಈಶ್ವರ ಮಲ್ಪೆ ಅವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular