HomeLatest Newsಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡುವಂತೆ RCB ಗೆ ವೆಂಕಟೇಶ್ ಪ್ರಸಾದ್ ಮನವಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡುವಂತೆ RCB ಗೆ ವೆಂಕಟೇಶ್ ಪ್ರಸಾದ್ ಮನವಿ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ತನ್ನ ಪಾಲಿನ ತವರು ಪಂದ್ಯಗಳನ್ನು ಆಡುವಂತೆ ಆರ್‌ಸಿಬಿ ತಂಡಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ ಮಾಡಿದ್ದಾರೆ.

ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಕ್ರೀಡಾಂಗಣ ಸಜ್ಜಾಗಿದೆ. 2026ರ ಆವೃತ್ತಿಯ ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಪಾಲಿನ ತವರು ಪಂದ್ಯಗಳನ್ನು ಆರ್‌ಸಿಬಿ ಬೆಂಗಳೂರಿನಲ್ಲಿಯೇ ಆಡಲಿ ಎಂದು ಮನವಿ ಮಾಡುತ್ತೇನೆ. ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯ ಸರ್ಕಾರದಿಂದ ಪಂದ್ಯ ನಡೆಸಲು ಅನುಮತಿ ಪತ್ರ ಪಡೆಯುವ ವಿಶ್ವಾಸದಲ್ಲಿದ್ದೇವೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಸುಗಮವಾಗಿ ಪಂದ್ಯ ನಡೆಸಲು ಸರ್ಕಾರದೊಂದಿಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಆರ್‌ಸಿಬಿ ಈ ವಿಚಾರದಲ್ಲಿ ಗಮನಹರಿಸಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular