HomeLatest NewsBIG NEWS: ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ...

BIG NEWS: ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ಬೆಲೆಗಿಂದ ಹೆಚ್ಚಿನ ದರ ನೀಡುವುದಾಗಿ ಘೋಷಣೆ

ಬೆಳಗಾವಿ: ಕಬ್ಬು ಬೆಳೆಗಾರರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಗುಡ್ ನ್ಯೂಸ್ ನೀಡಿದೆ. ಪ್ರತಿ ಟನ್ ಕಬ್ಬಿಗೆ 3350 ರೂಪಾಯಿ ನೀಡುವುದಾಗಿ ಘೋಷಿಸಿದೆ.

ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಸ್ವರೂಪ್ ಮಹಾದೇವರಾವ್ ಮಾಹಾಡಿಕ್ ಎಂಬುವವರ ಒಡೆತನದಲ್ಲಿದ್ದು, ಒಂದು ಟನ್ ಕಬ್ಬಿಗೆ ರಾಜ್ಯ ಸರ್ಕಾರ ನಿಗದಿ ಮಾಡಿದ ಬೆಲೆಗಿಂತಲೂ ಹೆಚ್ಚು ದರ ನೀಡುವುದಾಗಿ ತಿಳಿಸಿದೆ.

ಸರ್ಕಾರ ಟನ್ ಕಬ್ಬಿಗೆ 3300 ರೂಪಾಯಿ ನೀಡಲು ನಿರ್ಧರಿಸಿದೆ. ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಇನ್ನೂ 50 ರೂಪಾಯಿ ಹೆಚ್ಚಿಸಿ 3350 ರೂಪಾಯಿ ನೀಡುವುದಾಗಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular