
ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ ದೂ.ಸಂ.: 08182-248940ನ್ನು ಸಂಪರ್ಕಿಸುವುದು.

