HomeEntertainmentಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅಭಿಜಿತ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅಭಿಜಿತ್

ನಾಯಕ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹಿರಿಯ ನಟ ಅಭಿಜಿತ್  ಇಂದು ತಮ್ಮ 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

1990ರಲ್ಲಿ ತೆರೆಕಂಡ ‘ಕಾಲೇಜ್ ಹೀರೋ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಅಭಿಜಿತ್ 1991 ರಂದು ಸುಬ್ಬರಾವ್ ನಿರ್ದೇಶನದ ‘ಮಾಂಗಲ್ಯ’ ದಲ್ಲಿ ತೆರೆ ಹಂಚಿಕೊಂಡರು. ಬಳಿಕ ಹಲವಾರು ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡರು. ‘ಸಮರಸಿಂಹ ನಾಯಕ’ ‘ಜೋಡಿ ನಂಬರ್ ಒನ್’ ‘ವಿಷ್ಣು’ ಸೇರಿದಂತೆ ಕೆಲ ಸಿನಿಮಾಗಳನ್ನು ತಮ್ಮ ಬಾಲಾಜಿ ಕ್ರಿಯೇಶನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.

ನಟ ಅಭಿಜಿತ್ ಕಳೆದ ವರ್ಷ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ನಲ್ಲಿ ತೆರೆ ಹಂಚಿಕೊಂಡಿದ್ದು, ಇತ್ತೀಚಿಗೆ ‘ಅಡವಿ ಕಟ್ಟೆ’ ಎಂಬ  ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ನಾಯಕ  ನಟನಾಗಿ ಅಭಿನಯಿಸುತ್ತಿದ್ದಾರೆ. ಜೀ ಕನ್ನಡ  ವಾಹಿನಿಯಲ್ಲಿ ಪ್ರಸಾರವಾಗುವ ಸತ್ಯ  ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular