BREAKING : ಹಿರಿಯ ನಟಿ ಬಿ.ಸರೋಜಾ ದೇವಿ ನಿಧನ, ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ.!

ಬೆಂಗಳೂರು :  ಹಿರಿಯ ನಟಿ ಬಿ.ಸರೋಜಾ ದೇವಿ ನಿಧನರಾಗಿದ್ದು,  ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಹಿರಿಯ ನಟಿ ಬಿ.ಸರೋಜಾ ದೇವಿ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಹಲವು ಸ್ಟಾರ್ ನಟರು, ನಟಿಯರು ಕಂಬನಿ ಮಿಡಿದಿದ್ದಾರೆ.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read