ನವದೆಹಲಿ : ಬಾಲಿವುಡ್ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಬೆಳಗ್ಗೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿದೆ. ಏತನ್ಮಧ್ಯೆ, , “ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಕುಟುಂಬವು ಅವರನ್ನು ಮನೆಗೆ ಕರೆದೊಯ್ಯಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿದೆ. ಧರ್ಮೇಂದ್ರ ಸಾವಿನ ವದಂತಿ ಹರಡಿದ ಬಳಿಕ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ಧರ್ಮೇಂದ್ರ ಆರೋಗ್ಯ ಸುಧಾರಿಸಿ ಇನ್ನಷ್ಟು ವರ್ಷ ಚೆನ್ನಾಗಿರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

