SHOCKING : ಹಾಸನದಲ್ಲಿ ‘ಹೃದಯಾಘಾತ’ಕ್ಕೆ ನಿನ್ನೆಒಂದೇ ದಿನ ಐವರು ಬಲಿ :  ಕಳೆದ 40 ದಿನಗಳಲ್ಲಿ 23 ಜನ ಸಾವು.!

ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ನಿನ್ನೆ ಒಂದೇ ದಿನ ಐವರು ಬಲಿಯಾಗಿದ್ದು, ಕಳೆದ 40 ದಿನಗಳಲ್ಲಿ 23 ಜನ ಸಾವನ್ನಪ್ಪಿದ್ದಾರೆ.

1) ನಾಡಕಚೇರಿ ಡಿ ಗ್ರೂಪ್ ನೌಕರ ಸಾವು
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ ಅವರು ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

2) ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನಿವಾಸಿ ಇಂಗ್ಲೀಷ್ ಫ್ರೊಫೆಸರ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನ ಮುತ್ತ್ಯಯ್ಯ (58) ಎಂದು ಗುರುತಿಸಲಾಗಿದೆ. ಇವರು ಹೊಳೆನರಸೀಪುರದ ಕಾಲೇಜೊಂದರಲ್ಲಿ ಇಂಗ್ಲೀಷ್ ಫ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು.

3) ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಲೇಪಾಕ್ಷಿ (51) ಎಂದು ಗುರುತಿಸಲಾಗಿದೆ.ಮನೆಯಲ್ಲಿ ಧಿಡೀರನೇ ಲೇಪಾಕ್ಷಿ ನನಗೆ ಸುಸ್ತು ಆಗುತ್ತಿದೆ ಎಂದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.

4) ರಜೆಗೆ ಎಂದು ಊರಿಗೆ ಬಂದ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

5) ಹೃದಯಘಾತದಿಂದ 63 ವರ್ಷದ ಸತ್ಯನಾರಾಯಣರಾವ್ ಸಾವನ್ನಪ್ಪಿದ್ದಾರೆ. ಹಾಸನಾಂಬ ದೇವಾಲಯದ ಹಿಂಭಾಗದಲ್ಲಿ ಘಟನೆ ನಡೆದಿದೆ. ಹಾಸನ ನಗರದ ರಂಗೋಲಿ ಹಳ್ಳ ಬಡಾವಣೆಯ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಆಟೋ ಚಾಲನೆ ವೇಳೆ ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಆಟೋ ಚಾಲಕ ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read