HomeKarnatakaಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ; ಪೊಲೀಸ್ ಠಾಣೆ ಎದುರು ಧರಣಿ ನಿರ್ಧಾರ...

ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ; ಪೊಲೀಸ್ ಠಾಣೆ ಎದುರು ಧರಣಿ ನಿರ್ಧಾರ ಹಿಂಪಡೆದ VHP

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳ ಎದುರು ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿದ್ದ ಧರಣಿಯನ್ನು ವಾಪಾಸ್ ಪಡೆಯಲಾಗಿದೆ.

ಶಿಕ್ಷಕಿಯಿಂದ ಧರ್ಮದ ಅವಹೇಳನ ಆರೋಪ ವಿಚಾರವಾಗಿ ಶಿಕ್ಷಕಿ ವಿರುದ್ಧ ಪ್ರತಿಭಟನೆ ನಡೆಸಿದ್ದವರ ಮೇಲೆ ಎಫ್ ಐ ಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳ ಎದುರು ವಿಹೆಚ್ ಪಿ ಧರಣಿ ನಡೆಸುವುದಾಗಿ ಹೇಳಿತ್ತು. ಐದು ಪೊಲೀಸ್ ಠಾಣೆಗಳ ಎದುರು ಧರಣಿ ನಡೆಸಲು ಮುಂದಾಗಿತ್ತು. ಆದರೆ ಇದೀಗ ಪೊಲೀಸ್ ಠಾಣೆಗಳ ಎದುರು ಧರಣಿ ನಿರ್ಧರ ಕೈಬಿಟ್ಟಿದೆ.

ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ ಬಳಿಕ ನಗರ ಪೊಲೀಸ್ ಕಮಿಷ್ನರ್ ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ವಿಹೆಚ್ ಪಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular