ಬೆಂಗಳೂರು: ಕರ್ನಾಟಕ ಹೈಕೋರ್ಟ್ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ವಿಭು ಬಖ್ರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಲ್ಲಿ ನ್ಯಾಯಮೂರ್ತಿ ವಿಭು ಬಖ್ರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರರಾವ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಕರ್ನಾಟಕ ಹೈಕೋರ್ಟ್ ಗೆ ವರ್ಗಾವಣೆಗೊಂಡಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.