ನವದೆಹಲಿ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ತಮಿಳುನಾಡು ಡಿಜಿಪಿ ಕಚೇರಿಗೆ ಇ-ಮೇಲ್ ಮೂಲಕ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರ ತಮಿಳುನಾಡಿನ ಚೆನ್ನೈನಲ್ಲಿರುವ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಸಂದೇಶ ಬಂದಿದೆ.
ತಕ್ಷಣ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಟೀಂ ಉಪರಾಷ್ಟ್ರಪತಿ ಅವರ ಚೆನ್ನೈ ನಿವಾಸಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಸದ್ಯ ಇದೊಂದು ಹುಸಿಬಾಂಬ್ ಕರೆ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ.
